ಹಳೇ ದ್ವೇಷಕ್ಕೆ ಭೀಕರ ಹತ್ಯೆ ಒಂದೇ ಮನೆಯ ನಾಲ್ವರ ಕೊಲೆ

ಮಂಗಳವಾರ, 5 ಸೆಪ್ಟಂಬರ್ 2023 (20:55 IST)
ತಮಿಳುನಾಡಿನ  ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಅದೇ ಊರಿನ ಮೂವರು ವ್ಯಕ್ತಿಗಳು ಹಳೆಯ ದ್ವೇಷದ ಕಾರಣದಿಂದ ನಾಲ್ವರನ್ನು ಕೊಚ್ಚಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಅಪರಾಧಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಆದರೆ, ಎಲ್ಲಾ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವವರೆಗೂ ಮೃತರ ಸಂಬಂಧಿಕರು ಮತ್ತು ಸ್ನೇಹಿತರು ಆ ಮೃತದೇಹಗಳನ್ನು ಸ್ವೀಕರಿಸುವುದಿಲ್ಲ ಎಂದು ಹಠ ಹಿಡಿದಿದ್ದಾರೆ.ಇನ್ನು  ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಅವರು ಪಲ್ಲಡಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆ ಕುಟುಂಬಕ್ಕೆ ಸಮಾಧಾನಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ