ಮೈಸೂರಿನಲ್ಲಿ ಬೋನಿಗೆ ಬಿದ್ದ ಚಿರತೆ
ಮೈಸೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಮಾರಶೆಟ್ಟಹಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು. ಅದರಂತೆ RFO ಸುರೇಂದ್ರ, DRFO ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ.