ಶಿಕ್ಷಣ ಸಚಿವರಿಗೆ ಫೋನ್ ಮಾಡಿ ಪ್ರಶ್ನೆ ಕೇಳಿ

ಸೋಮವಾರ, 28 ಅಕ್ಟೋಬರ್ 2019 (19:39 IST)
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ ನೇರ ಫೋನ್ ಇನ್ ನಲ್ಲಿ ಸಂವಾದ ನಡೆಸಲಿದ್ದಾರೆ.

ಅಕ್ಟೋಬರ್ 30ರಂದು ಬೆಳಗಿನ 8.35 ರಿಂದ 9.35 ಗಂಟೆಯವರೆಗೆ “ಗುಣಮಟ್ಟದ ಶಿಕ್ಷಣದ ಕುರಿತು” ಕಲಬುರಗಿ ಆಕಾಶವಾಣಿ ಕೇಂದ್ರದಿಂದ ನೇರ ಫೋನ್ ಇನ್ ಕಾರ್ಯಕ್ರಮದ ಮೂಲಕ ಸಂವಾದ ನಡೆಸಲಿದ್ದಾರೆ. ಹೀಗಂತ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತಾಲಯ ಕಚೇರಿಯ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ವಿಭಾಗದ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ), ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಿಕ್ಷಣ ಆಸಕ್ತರು ಗುಣಮಟ್ಟದ ಶಿಕ್ಷಣದ ವ್ಯವಸ್ಥೆಗೆ ಸಂಬಂಧಿಸಿದಂತೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಆಸಕ್ತರು ಕಲಬುರಗಿ ಆಕಾಶವಾಣಿ ಕೇಂದ್ರದ ದೂರವಾಣಿ ಸಂಖ್ಯೆಗಳಾದ 08472-295989, 261580 ಗಳಿಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳಬಹುದಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ