ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾದವನ ಸೆರೆ

ಶನಿವಾರ, 24 ಜೂನ್ 2017 (16:25 IST)
ಮಹಿಳೆಯ ಮೇಲೆ ಹಾಡಹಗಲೇ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
 
ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಜೂನ್ 16 ರಂದು 39 ವರ್ಷ ವಯಸ್ಸಿನ ಆರೋಪಿ 50 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನು. 
 
ಅತ್ಯಾಚಾರಕ್ಕೊಳಗಾದ ಮಹಿಳೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಳು. ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದರು.
 
ಇದೀಗ ಬೆಳ್ಳೂರು ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನಾಗಮಂಗಲ ಜೆಎಂಎಫ್‌ಸಿ ಕೋರ್ಟ್ ವಶಕ್ಕೆ ಒಪ್ಪಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ