ಇಂದು ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಸಭೆ

ಮಂಗಳವಾರ, 20 ಏಪ್ರಿಲ್ 2021 (08:52 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ.

ಇಂದು ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸಂಜೆ 4.30ಕ್ಕೆ ಸರ್ವಪಕ್ಷಗಳ ನಾಯಕರ ಸಭೆ ನಡೆಸಲಾಗುವುದು. ಈ ಸಭೆ ಉಭಯ ಸದನಗಳ ಮುಖಂಡರು ಭಾಗಿಯಾಗಲಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಈ ಸಭೆಯಲ್ಲಿ ಉಪಸ್ಥಿತರಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷ ಸಭೆ ನಡೆಸಲಾಗುತ್ತದೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ರಾಜ್ಯಪಾಲರ ಅಭಿಪ್ರಾಯ ಕೇಳಿ ಕಠಿಣ ನಿಯಮ ಜಾರಿ ಬಗ್ಗೆ ಇಂದು  ಅಂತಿಮ ನಿರ್ಧಾರ  ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ