ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಿದ್ದು, ತಹಶೀಲ್ದಾರ್ ರವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಾಕಿ ಆರ್ಡರ್ ಪಾಸ್ ಮಾಡಬೇಕಿರುವಂತಹ ಸರ್ವೇಗಳಿಗೆ ತಹಶೀಲ್ದಾರ್ ಗಳು ಆರ್ಡರ್ ಪಾಸ್ ಮಾಡಬೇಕು. ತದನಂತರ ಹಂತ-ಹಂತವಾಗಿ ಎಲ್ಲಾ ಒತ್ತುವರಿಗಳ ತೆರವು ಮಾಡಬೇಕು. ಯಾರಾದರು ತಡೆಯೊಡ್ಡಿದರೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ವಲಯ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ರವೀಂದ್ರ, ಡಾ. ಹರೀಶ್ ಕುಮಾರ್ , ಡಾ. ದೀಪಕ್, ಶ್ರೀಮತಿ ಪ್ರೀತಿ ಗೆಹ್ಲೋಟ್, ಎಲ್ಲಾ ವಲಯ ಜಂಟಿ ಆಯುಕ್ತರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.