ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಪಾತಕಿಗಳು

ಭಾನುವಾರ, 16 ಸೆಪ್ಟಂಬರ್ 2018 (11:14 IST)
ವಿಜಯಪುರ : ವಿಜಯಪುರದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದೀಗ 16 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದು ಬಾವಿಗೆ ಎಸೆದ ಘಟನೆ ನಡೆದಿದೆ.


ಮೃತ ಬಾಲಕಿಯ ಶವ ಗ್ರಾಮದ ಹೊರ ವಲಯದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಅತ್ಯಾಚಾರಗೈದ ದುಷ್ಕರ್ಮಿಗಳು ನಂತರ ಆಕೆಯನ್ನು ಕೊಲೆಮಾಡಿ ಬಾವಿಗೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.


ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ವಿಜಯಪುರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ