ಮಹಾಕನ್ನಡಿಗರಿಂದ ಹೊಸ ಅಭಿಯಾನ
ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೇಳಿಕೆ ವಿಚಾರವಾಗಿ ಪುಂಡಾಟ ಮೆರೆಯುತ್ತಿರುವ ಮಹಾರಾಷ್ಟ್ರಕ್ಕೆ ಮಹಾರಾಷ್ಟ್ರ ಕನ್ನಡಿಗರಿಂದಲೇ ಪ್ರತ್ಯುತ್ತರ ಸಿಕ್ಕಿದೆ. ಇಮೇಲ್ ಮೂಲಕ ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮಗಳನ್ನ ಕರ್ನಾಟಕಕ್ಕೆ ಸೇರಿಸಬೇಕು ಎಂದು ಜತ್ತ ತಾಲೂಕಿನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಸಿಎಂ ನೀಡಿರುವ ಹೇಳಿಕೆ ಸ್ವಾಗತಾರ್ಹವಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿರವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಾರಾಷ್ಟ್ರದ ಕನ್ನಡಿಗರು ಬೆಂಬಲ ಸೂಚಿಸಿ ಹೊಸ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿಗಳ ಸರ್ಕಾರಿ ಅಧಿಕೃತ ಇಮೇಲ್‌ಗೆ ಸಂದೇಶವನ್ನು ಕೂಡ ರವಾನೆ ಮಾಡಿದ್ದಾರೆ.