ಸಾಹಿತಿಗಳಿಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮಂಗಳವಾರ, 29 ಆಗಸ್ಟ್ 2023 (09:05 IST)
ಬೆಂಗಳೂರು : ಪ್ರಗತಿಪರ ಸಾಹಿತಿಗಳನ್ನು ಹತ್ಯೆ ಮಾಡುವುದಾಗಿ ಪತ್ರ ಬರೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 7 ಮಂದಿ ಸಾಹಿತಿಗಳಿಗೂ ಒಬ್ಬನೇ ಆರೋಪಿ ಪತ್ರ ಬರೆದ ವಿಚಾರ ಸಿಸಿಬಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
 
ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಿಂದ ದೃಢಪಟ್ಟಿದೆ. ದಾವಣಗೆರೆ ಮೂಲದಿಂದ ಪತ್ರ ಬಂದಿರುವುದು ಖಚಿತವಾಗಿದ್ದು, ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್ ಮಾಡಲಾಗಿದೆ. 

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ