ಶನಿವಾರ ತಡರಾತ್ರಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಉಪನಗರದ ವಿಶ್ವೇಶ್ವರ ಲೇಔಟ್‍ನ ಕುವೆಂಪು ಸರ್ಕಾರಿ ಶಾಲೆ ಕಾಂಪೌಂಡ್ ಬಳಿ ಸಾರ್ವಜನಿಕರ ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ಜ್ಞಾನಭಾರತಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ದಸ್ತಗಿರಿ ಆಗಿರುವ ಕುಖ್ಯಾತ ರೌಡಿಶೀಟರ್ ಹರೀಶ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ.