ನಗರದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಲೇ ಇದೆ . ವಾರದಲ್ಲಿ ಒಂದು ಕಡೆಯಾದರೂ ನಾಯಿಗಳ ಬೇಸತ್ತು, ಅನಾರೋಗ್ಯದ ಬಗ್ಗೆ, ಆಸ್ಪತ್ರೆಗೆ ದಾಖಲಾದ ಬಗ್ಗೆ, ವರದಿಗಳು ಹೆಚ್ಚಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಜನರಂತೂ ಭಯಭೀತಗೊಂಡಯ ಪ್ರಾಣಭಯದಲ್ಲೇ ಬದುಕಿದೆ.
ಇನ್ನೂ ನಗರದ ಯಾವುದೇ ವಾರ್ಡ್ ಗೆ ಹೋದರೂ ನಾಯಿಗಳು ಹಿಂಡು ಹಿಂಡಾಗಿ ಬರುತ್ತದೆ. ಗುಂಪು ಗುಂಪಾಗಿ ಸುತ್ತಾಡುವ ನಾಯಿಗಳು ದಾರಿಯಲ್ಲಿ ಸಂಚರಿಸುವ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ. ಕೆಲವು ವೇಳೆ ಶಾಲಾ ಮಕ್ಕಳ ಮೇಲೂ ದಾಳಿ ಮಾಡಿವೆ. ಮಕ್ಕಳ ಮೇಲೆ ನಾಯಿಗಳ ದಾಳಿ ನಡೆದಾಗ, ಆ ಸಂದರ್ಭದಲ್ಲಿ ಸಾರ್ವಜನಿಕರ ಕೂಗು ಎದ್ದಾಗ ದಿಢೀರ್ ಕ್ರಮದ ಭರವಸೆ ನೀಡುವುದು ಮಹಾನಗರ ಪಾಲಿಕೆಯ ಕೆಲಸವಾಗಿದೆ. ಆದ್ರೆ ಪಾಲಿಕೆ ಯಾವುದೇ ಕ್ರಮ ಜರುಗಿಸದೆ ಜಾಣ ಮೌನಕ್ಕೆ ಶರಣಾಗುತ್ತದೆ. ವರ್ಷಗಳು ಉರುಳಿ ಹೋಗುತ್ತಿವೆಯೇ ಹೊರತು ನಾಯಿಗಳ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ.