ಅರ್ಜಿದಾರರ ಆರೋಪವೇನಿತ್ತು?: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್. ಅಶೋಕ್ ಸಂಬಂಧಿಯಾದ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಕೇವಲ ಪಿಯುವರೆಗೆ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ, ಸಿಎಂ ಮತ್ತು ಅಶೋಕ್ ಅವರ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು.