ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಕೂಗು; ಹೋರಾಟಗಾರರು ಪೊಲೀಸ್ ವಶಕ್ಕೆ

ಗುರುವಾರ, 2 ಆಗಸ್ಟ್ 2018 (14:06 IST)
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟ ವಿರೋಧಿಸಿ ಹಾಗೂ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದವನ್ನು ಪೊಲೀಸರು ಮುಂಜಾಗೃತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ ಸೇರಿದಂತೆ ಹಲವರನ್ನು ಮುಂಜಾಗೃತ ಕ್ರಮವಾಗಿ  ಸ್ಟೇಷನ್ ಬಜಾರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸುವವರಿದ್ದರು. ಧ್ವಜಾರೋಹಣ ನಂತರ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಎಮ್.ಎಸ್.ಪಾಟೀಲ್ ಹಾಗೂ ಹಲವರನ್ನು ಪೊಲೀಸರು ಮುಂಚೆಯೇ ವಶಕ್ಕೆ ಪಡೆದಿದ್ದಾರೆ.

ಇನ್ನು ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಪ್ರತಿಭಟಿಸಲು ಮುಂದಾದ ಸುಮಾರು ಹತ್ತು ಜನ ಕಾರ್ಯಕರ್ತರನ್ನು ಸಹ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಹತ್ತಿರ ಬಂಧಿಸಿ ಕರೆದೊಯ್ಯಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ