ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

Sampriya

ಮಂಗಳವಾರ, 30 ಸೆಪ್ಟಂಬರ್ 2025 (14:23 IST)
ಮಂಗಳೂರು:  ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ಅ.8ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಮಹೇಶ್ ಅವರು ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸದರು. ಅದರ ವಿಚಾರಣೆ ನಡೆಸಿದ ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು, ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ. 

ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು. 

ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. 

ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿತ್ತು. ಆದೇಶ ಪಾಲನೆ ಮಾಡದೇ ಇದ್ದಲ್ಲಿ ಬಂಧಿಸಿ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಸೂಚನೆ ನೀಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ