‌ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Sampriya

ಶನಿವಾರ, 2 ಆಗಸ್ಟ್ 2025 (15:37 IST)
Photo Credit X
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂದ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ ನಡೆಸಿದೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಸಲುವಾಗಿ ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. 

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‌ಐಎ ತನಿಖೆಗೆ ವಹಿಸಿತ್ತು.

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. 
ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ 11ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ