ತಾಯಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ಕೊಂದ ಮಗ
ಮಂಗಳವಾರ, 29 ಅಕ್ಟೋಬರ್ 2019 (11:50 IST)
ಚಾಮರಾಜನಗರ : ತಾಯಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ಮಗ ಕೊಲೆ ಮಾಡಿದ ಘಟನೆ ಚಾಮರಾಜನಗರದ ಜ್ಯೋತಿಗೌಡನಪುರದಲ್ಲಿ ನಡೆದಿದೆ.
ಆರೋಪಿಯ ತಾಯಿಯ ಜೊತೆ ಪಕ್ಕದ ಮನೆಯ 56 ವರ್ಷದ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ . ಇದನ್ನು ನಿಲ್ಲಿಸುವಂತೆ ಮಗ ತಾಯಿಗೆ ಎಷ್ಟೇ ಹೇಳಿದರೂ ಕೇಳದ ತಾಯಿ ತನ್ನ ಕೃತ್ಯವನ್ನು ಮುಂದುವರಿಸಿದ ಹಿನ್ನಲೆಯಲ್ಲಿ ಕೋಪಗೊಂಡ ಮಗ ರಾಡ್ ನಿಂದ ವ್ಯಕ್ತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ತಾನೇ ಖುದ್ದು ಠಾಣೆಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.