ಸುರೇಶ್ ಮನೆ ಸಮೀಪದ ಬಿಲ್ಡಿಂಗ್‍ವೊಂದರಲ್ಲಿ ಸೆಕ್ಯೂರಿಟಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಕುಟುಂಬಸ್ಥರ ಜತೆ ವಾಸಿಸುತ್ತಿದ್ದರು. ಆ.28ರಂದು ಬೆಳಗ್ಗೆ 8 ಗಂಟೆಗೆ ಪೂನಮ್ ಮನೆ ಮುಂದೆ ಆಟವಾಡುತ್ತಿದ್ದಾಗ ಮೂರು ಬೀದಿ ನಾಯಿಗಳು ಬಂದು ಏಕಾಏಕಿ ಮಗುವಿನ ಮೇಲೆ ದಾಳಿ ನಡೆಸಿವೆ. ಮಗುವಿನ ಕುತ್ತಿಗೆ, ತೊಡೆ, ಕಿವಿ ಭಾಗಕ್ಕೆ ಕಚ್ಚಿವೆ. ಗಾಯಗೊಂಡಿರುವ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಬೀದಿ ನಾಯಿಗಳ ಹಾವಳಿ ತಡೆಯುವಂತೆ ಈ ಹಿಂದೆ ಹಲವು ಬಾರಿ ಬಿಬಿಎಂಪಿಗೆ ದೂರು ನೀಡಿದ್ದರೂ, ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಮಗುವಿನ ಪಾಲಕರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಚ್‍ಎಎಲ್ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿz್ದÁರೆ. ಪ್ರಕರಣ ದಾಖಲಿಸಿಕೊಂಡಿರುವ ಎಚ್‍ಎಎಲ್ ಪೆÇಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.