ಮದುವೆಗೆ ಒಪ್ಪದ ಶಿಕ್ಷಕಿ.. ಹಾಡಹಗಲೇ ಕಿಡ್ನ್ಯಾಪ್‌

ಗುರುವಾರ, 30 ನವೆಂಬರ್ 2023 (18:28 IST)
ಮದುವೆ ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿದ ಪ್ರಕರಣವೊಂದು ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಈ ಘಟನೆ ನಡೆದಿದೆ.

ಬೆಳಗ್ಗೆ ಶಾಲೆಗೆ ತೆರಳಲು ಹೊರಟಿದ್ದ ಶಿಕ್ಷಕಿಯನ್ನು ಈಕೆಯ ಸಂಬಂಧಿ ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. 15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಪ್ರಸ್ತಾಪಕ್ಕೆ ಯುವತಿ ಹಾಗೂ ಯುವತಿ ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ