ವಿಚಿತ್ರವಾಗಿ ಆತ್ಮಹತ್ಯೆ ಮಾಡ್ಕೊಂಡ ಟೆಕ್ಕಿ
ಬೆಂಗಳೂರಿನಲ್ಲಿ ವಾಸವಾಗಿದ್ದ 51 ವರ್ಷದ ಟೆಕ್ಕಿಯೊಬ್ಬರು ತಮ್ಮ ಕಾರ್ನಲ್ಲಿ ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಟೆಕ್ಕಿ ಉಸಿರು ಚೆಲ್ಲಿದ್ದಾರೆ. ಈ ಘಟನೆ ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ. 51 ವರ್ಷದ ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್ ಕುಮಾರ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ವಿಜಯ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ನೈಟ್ರೋಜನ್ ಸಿಲಿಂಡರ್ ಖರೀದಿ ಮಾಡಿದ್ದಾರೆ. ನೈಟ್ರೋಜನ್ ಅನಿಲ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಸ್ತೆ ಬದಿ ಕಾರ್ ನಿಲ್ಲಿಸಿದ ವಿಜಯ್ ಕುಮಾರ್ ಸಾರ್ವಜನಿಕರ ಸಹಾಯದಿಂದ ವಾಹನಕ್ಕೆ ಕವರ್ ಹಾಕಿದ್ದಾರೆ. ನಂತರ ಒಳಗೆ ಹೋಗಿ ಕಾರ್ ಹಿಂಬದಿ ಸೀಟ್ನಲ್ಲಿ ಕುಳಿತಿದ್ದಾರೆ. ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡು ನೈಟ್ರೋಜನ್ ಗ್ಯಾಸ್ ಹಾಯಿಸಿಕೊಂಡಿದ್ದಾರೆ. ಅನುಮಾನ ಬಂದು ಸಾರ್ವಜನಿಕರು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಜಯ್ ಕುಮಾರ್ ತಮ್ಮ ನೋವಿನ ಬಗ್ಗೆ ಮನೆಯವರ ಜೊತೆಗೂ ಚರ್ಚಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅನಾರೋಗ್ಯದಿಂದ ಸಾವಿನ ದಾರಿ ಹುಡುಕುತ್ತಾ ಸಾಗಿದ ಟೆಕ್ಕಿ ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.