ಪತಿಯನ್ನು ಕಾಲಿನಿಂದ ಹಿಸುಕಿ ಕೊಂದ ಪತ್ನಿ

ಬುಧವಾರ, 14 ಏಪ್ರಿಲ್ 2021 (07:39 IST)
ಬೆಂಗಳೂರು : 41 ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಕತ್ತು ಹಿಸುಕಿ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ಕಸದ ವಾಹನದ ಚಾಲಕನಾಗಿದ್ದು, ಮದ್ಯ ವ್ಯಸನಿಯಾಗಿದ್ದ. ಆಗಾಗ ಕುಡಿದು ಬಂದು ಪತ್ನಿಗೆ ಹಿಂಸೆ ಮಾಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಪತಿಯನ್ನು ಕೆಳಗೆ ತಳ್ಳಿ  ಕಾಲಿನಲ್ಲಿ ಆತನ ಕತ್ತನ್ನು ಹಿಸುಕಿ ಕೊಂದಿದ್ದಾಳೆ.

ಇದನ್ನ ನೋಡಿದ ನೆರೆಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದಾಗ ಆತ ಸತ್ತಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಮಹಿಳೆಯ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ