ಯುವತಿಯ ಪರಿಚಯ:
ಕಳೆದು ಮೂರು ತಿಂಗಳ ಹಿಂದೆ ಸಿವಿಲ್ ಗುತ್ತಿಗೆದಾರ ಲೋಹಿತ್ ನಾಗರಬಾವಿಯ ನಮ್ಮೂರ ತಿಂಡಿ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಿಂತಿದ್ದರು. ಈ ವೇಳೆ ಅವರ ಬಳಿ ಬಂದ ಇಬ್ಬರು ಯುವಕರು, ನಮ್ಮ ಬಳಿ ಇರುವ ಹರ್ಬಲ್ ಲೈಫ್ ಉತ್ಪನ್ನಗಳನ್ನು ತೆಗೆದುಕೊಂಡರೆ ನೀವು ಬೇಗ ಸಣ್ಣಗಾಗುತ್ತೀರಿ ಎಂದು ನಂಬಿಸಿದ್ದರು. ನಂತರ ಆರೋಪಿಗಳು ವಿದ್ಯಾ ಮೊಬೈಲ್ ನಂಬರ್ ಕೊಟ್ಟು ನೀವು ಈ ನಂಬರ್ಗೆ ಕರೆ ಮಾಡಿ ಮಾತನಾಡಿ ಎಂದಿದ್ದರು. ಅದರಂತೆ ವಿದ್ಯಾಗೆ ಕರೆ ಮಾಡಿದ್ದ ಲೋಹಿತ್ ಹರ್ಬಲ್ ಲೈಫ್ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಖರೀದಿಸಿದ್ದರು. ನಂತರ ಆಗಾಗ ಲೋಹಿತ್ಗೆ ಕರೆ ಮಾಡುತ್ತಿದ್ದ ವಿದ್ಯಾ ಸಲುಗೆ ಬೆಳೆಸಿಕೊಂಡಿದ್ದಳು. ದಿನ ಕಳೆದಂತೆ ಸಲುಗೆ ಬೆಳೆಸಿಕೊಂಡಿದ್ದ ಯುವತಿ ಇತ್ತೀಚೆಗೆ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ಗೆ ಲೋಹಿತ್ ಕರೆದುಕೊಂಡು ಹೋಗಿದ್ದಳು. ಈ ವೇಳೆ ಇಬ್ಬರೂ ಆತ್ಮೀಯವಾಗಿ ಏಕಾಂತದಲ್ಲಿದ್ದರು. ಕೆಲ ಸಮಯದ ಬಳಿಕ ವಿದ್ಯಾ ಮಾದಕ ವಸ್ತು ಸೇವಿಸಿ ರೆಸಾರ್ಟ್ ಸಿಬ್ಬಂದಿ ಜತೆ ಜಗಳ ಮಾಡಿದ್ದಳು. ಆಕೆಯನ್ನು ಲೋಹಿತ್ ಸಮಾಧಾನಪಡಿಸಿದರೂ ಆಕೆ ಕೇಳದಾಗ ವಿದ್ಯಾಳನ್ನು ಅಲ್ಲಿಯೇ ಬಿಟ್ಟು ಲೋಹಿತ್ ಮನೆಗೆ ಬಂದಿದ್ದರು.
ಖಾಸಗಿ ದೃಶ್ಯಾಗಳಿರುವ ಪೆನ್ಡ್ರೈವ್ ನೀಡಿ ಬ್ಲ್ಯಾಕ್ ಮೇಲ್:
ಸೆ.29ರಂದು ವಿದ್ಯಾ, ಲೋಹಿತ್ಗೆ ಕರೆ ಮಾಡಿ ನಾಗರಬಾವಿ ಬಳಿ ಬರುವಂತೆ ಸೂಚಿಸಿದ್ದಳು. ಲೋಹಿತ್ ಆಕೆಯನ್ನು ಭೇಟಿಯಾದಾಗ ಇವರಿಬ್ಬರೂ ರೆಸಾರ್ಟ್ನಲ್ಲಿ ಕಳೆದಿದ್ದ ಖಾಸಗಿ ಫೆÇೀಟೊಗಳನ್ನು ತೋರಿಸಿ 1 ಕೋಟಿ ರೂ. ಕೊಡುವಂತೆ ಬ್ಲ್ಯಾಕ್ಮೇಲ್ ಮಾಡಿದ್ದಳು. ಇದರಿಂದ ಆತಂಕಗೊಂಡ ಲೋಹಿತ್ ಆರಂಭದಲ್ಲಿ 2 ಲಕ್ಷ ರೂ. ಕೊಟ್ಟಿದ್ದರು. ಇದಾದ ಕೆಲ ದಿನಗಳ ಬಳಿಕ ವಿದ್ಯಾ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಳು. ಕೆಲ ದಿನಗಳ ಹಿಂದೆ ಇಬ್ಬರು ಅಪರಿಚಿತ ಹುಡುಗರು ಲೋಹಿತ್ನ್ನು ಭೇಟಿಯಾಗಿ ಪೆನ್ಡ್ರೈವ್ ಕೊಟ್ಟು ಇದರಲ್ಲಿ ಇರುವುದನ್ನು ನೋಡಿ ಎಂದು ಹೇಳಿ ಹೋಗಿದ್ದರು. ಪೆನ್ಡ್ರೈವ್ನಲ್ಲಿ ಏನಿದೆ ಎಂದು ಪರಿಶೀಲಿಸಿದಾಗ ವಿದ್ಯಾ ಮತ್ತು ಲೋಹಿತ್ ರೆಸಾರ್ಟ್ನಲ್ಲಿ ಕಳೆದಿದ್ದ ಹಲವಾರು ಖಾಸಗಿ ದೃಶ್ಯಗಳಿದ್ದವು. ವಿದ್ಯಾಗೆ ಕರೆ ಮಾಡಿದ ಲೋಹಿತ್ ಈ ಬಗ್ಗೆ ಪ್ರಶ್ನಿಸಿದ್ದರು. 1 ಕೋಟಿ ರೂ. ಕೊಡದಿದ್ದರೆ, ವಿವಾಹವಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ನಿಮ್ಮ ವಿರುದ್ಧ ಪೆÇಲೀಸರಿಗೆ ದೂರು ಕೊಡುತ್ತೇನೆ ಎಂದು ಬೆದರಿಸಿದ್ದಳು.