ರಾಹುಲ್ ಗಾಂಧಿ ಅಪ್ಪಿಕೊಂಡ ಯುವಕ

ಮಂಗಳವಾರ, 17 ಜನವರಿ 2023 (18:09 IST)
ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿಯವರನ್ನು ಯುವಕನೊಬ್ಬ ಓಡಿಬಂದು ತಬ್ಬಿಕೊಂಡಿರುವ ಘಟನೆ ನಡೆದಿದೆ. ಭದ್ರತಾ ಉಲ್ಲಂಘನೆ ಮಾಡಿದ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಓಡಿ ಹೋಗಿ ಅವರನ್ನು ತಬ್ಬಿಕೊಂಡಿದ್ದಾನೆ. ಆ ವ್ಯಕ್ತಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಸುತ್ತಲಿನ ಭದ್ರತೆಯನ್ನು ಮುರಿದು ಗಂಭೀರ ಭದ್ರತಾ ಉಲ್ಲಂಘನೆ ಮಾಡಿದ್ದಾನೆ. ತಕ್ಷಣ ಆ ವ್ಯಕ್ತಿಯನ್ನು ಭದ್ರತಾ ಅಧಿಕಾರಿಗಳು ದೂರ ತಳ್ಳಿದ್ದಾರೆ. ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಯ ಬಗ್ಗೆ ಕಾಂಗ್ರೆಸ್ ದೂರು ನೀಡಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿತ್ತು. ಈ ಯಾತ್ರೆಯಲ್ಲಿ ಭಾಗವಹಿಸುವ ರಾಹುಲ್ ಗಾಂಧಿ ಮತ್ತು ಇತರರಿಗೆ ಭದ್ರತೆಯನ್ನು ಒದಗಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿತ್ತು. ಕಾಂಗ್ರೆಸ್ ಪಕ್ಷದ ಭದ್ರತಾ ಉಲ್ಲಂಘನೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿತ್ತು. ರಾಹುಲ್ ಗಾಂಧಿಯವರ ಕಡೆಯಿಂದ ನಿಗದಿಪಡಿಸಿದ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಹಲವಾರು ಸಂದರ್ಭಗಳಲ್ಲಿ ಗಮನಿಸಲಾಗಿದೆ. ಈ ಸಂಗತಿಯನ್ನು ಕಾಲಕಾಲಕ್ಕೆ ಅವರಿಗೆ ತಿಳಿಸಲಾಗಿದೆ ಎಂದು ಸಿಆರ್‌ಪಿಎಫ್ ಹೇಳಿಕೆಯಲ್ಲಿ ತಿಳಿಸಿತ್ತು. ರಾಹುಲ್ ಗಾಂಧಿಗೆ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ 2020ರಿಂದ 113 ಬಾರಿ ಭದ್ರತಾ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ