ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಎದುರೇ ತನ್ನ ಬೈಕ್‌ಗೆ ಬೆಂಕಿಕೊಟ್ಟ ಯುವಕ

Sampriya

ಬುಧವಾರ, 14 ಆಗಸ್ಟ್ 2024 (18:22 IST)
Photo Courtesy X
ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ  ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ.

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದಾರೆ. ಬೈಕ್ ಸಂಪೋರ್ಣ ಸುಟ್ಟು ಕರಕಲಾಗಿದೆ.

ಟ್ರೆಕ್ಕಿಂಗ್ ಹೋಗಿದ್ದ ಪೃಥ್ವಿ ನಾಪತ್ತೆಯಾಗಿರುವುದರಿಂದ ದೂರ ನೀಡಲು ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ.  ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ