ಕೋಲಾರ : ನವ ವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗಂಗರಸನಹಳ್ಳಿಯಲ್ಲಿ ನಡೆದಿದೆ.
ಎಂ.ಸುಮಾ(21) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. ಸದ್ಯ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಅರೋಪ ಕೇಳಿಬರುತ್ತಿದೆ.
ಎಂ.ಹೊಸಹಳ್ಳಿ ನಿವಾಸಿ ಸುಮಾಳನ್ನ 4 ತಿಂಗಳ ಹಿಂದೆಯಷ್ಟೆ ಗಂಗರಸನಹಳ್ಳಿಯ ಸುರೇಶ್ಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಎರಡು ದಿನದ ಹಿಂದೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸುಮಾ ಇಂದು ಕೊನೆಯುಸಿರೆಳೆದಿದ್ದಾರೆ.