ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ
ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಭಾಷಣ ಮಾಡುವ ಸಂದರ್ಭದಲ್ಲಿ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ, ಅರಣ್ಯ ಸಚಿವರನ್ನು ಟೀಕಿಸುವ ಮಧ್ಯೆ ಅನಗತ್ಯವಾಗಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನ ನೋಡಿದ್ರೆ ಗೊತ್ತಾಗುತ್ತೆ. ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.