ಮಂಗಳೂರು: ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸಂಬಂದ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಮತ್ತು ಇತರ 13 ಜನರ ಹೆಸರುಗಳನ್ನು ದಾಖಲಿಸಲಾಗಿದ್ದು, ಇವರ ವಿರುದ್ಧ ಸೆಕ್ಷನ್ 103, 109, 118(1), 118(2), 190, 191(1), 191(2) ಮತ್ತು 191(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಮೊಹಮ್ಮದ್ ನಿಸಾರ್ ಎಂಬುವವರು ದೂರು ನೀಡಿದ್ದು, ದೂರಿನ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಮುಸ್ತಫಾ ಎಂಬವರಿಂದ ದೂರವಾಣಿ ಕರೆ ಬಂದಿತ್ತು. ಇರ ಕೋಡಿಯಲ್ಲಿ ಅಬ್ದುಲ್ ರಹೀಮ್ ಮತ್ತು ಕಲಂದರ್ ಶಫಿ (ಗಾಯಗೊಂಡ) ಮೇಲೆ 'ತಲ್ವಾರ್' ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು.
ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ತಲುಪಿದಾಗ ರಹೀಮ್ ತಲೆ, ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗೊಂಡು ಕುಸಿದು ನೆಲಕ್ಕೆ ಬಿದ್ದಿದ್ದರು.
ರಹೀಮ್ ಪಕ್ಕದಲ್ಲಿ ಕುಳಿತಿದ್ದ ಕಲಂದರ್ ಶಫಿ ಅವರ ಎದೆ, ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.