ರಾಜ್ಯೋತ್ಸವ ನಿಮಿತ್ತ ಶೇ. 50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಮಂಗಳವಾರ, 6 ನವೆಂಬರ್ 2018 (16:44 IST)
ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿರುವ ಎಲ್ಲ ಪುಸ್ತಕಗಳು ನವೆಂಬರ್ ಮಾಹೆಯಲ್ಲಿ ಶೇಕಡಾ 50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಪ್ರಾಧಿಕಾರವು ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವ ಉದ್ದೇಶದಿಂದ ನವೆಂಬರ್ ಮಾಹೆಯಲ್ಲಿ ಶೇ. 50 ರ ರಿಯಾಯಿತಿ ದರದಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

ಇದಲ್ಲದೇ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು www.kannadapustakapradhikara.com ಅಂತರ್ಜಾಲದಲ್ಲಿನ ನಮ್ಮ ಪುಸ್ತಕಗಳು ವಿಭಾಗದ ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ನೇರವಾಗಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ