ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

Sampriya

ಮಂಗಳವಾರ, 19 ಆಗಸ್ಟ್ 2025 (14:59 IST)
Photo Credit facebook
ಬ್ರಹ್ಮಾವರ: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದಡಿಯಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಉಡು‍ಪಿ ಗ್ರಾಮಾಂತರ ಬಿಜೆಪಿಯ ಮಂಡಳಾಧ್ಯಕ್ಷರಾದ ರಾಜೀವ ಕುಲಾಲ್ ಅವರು ಈ ಸಂಬಂಧ ದೂರು ನೀಡಿದ್ದಾರೆ. ಆಗಸ್ಟ್ 16 ರಂದು ಫೇಸ್ ಬುಕ್‌ ಪೇಜ್‌ ನಲ್ಲಿ ವೀಡಿಯೋ ಮಾಡಿ ಪಕ್ಷದ ಹಿರಿಯರು, ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ
ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. 

ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 177/2025 US 196 (1),352, 353(2) BNSರಂತೆ ಆರೋಪಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ