ಗುತ್ತಿಗೆದಾರನಿಗೆ ನಿಂದನೆ, ಕೊಲೆ ಬೆದರಿಕೆ: ಪೊಲೀಸ್‌ ಕಸ್ಟಡಿಗೆ ಶಾಸಕ ಮುನಿರತ್ನ

Sampriya

ಭಾನುವಾರ, 15 ಸೆಪ್ಟಂಬರ್ 2024 (10:03 IST)
ಬೆಂಗಳೂರು: ಶನಿವಾರ ಬಂಧನಕ್ಕೆ ಒಳಗಾಗ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ, ಕಿರುಕುಳ, ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಈ ವೇಳೆ ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ