ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸುವಂತೆ ಒತ್ತಾಯಿಸಿ ಬೀದಿಗಿಳಿದ ಎಬಿವಿಪಿ
ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿ ನಗರದ ತಹಶೀಲ್ದಾರ ಕಚೇರಿ ಎದುರು ಬೃಹತ್ ಪ್ರತಿಭಟನೆಯು ಎಬಿವಿಪಿ ನೇತೃತ್ವದಲ್ಲಿ ನಡೆಯಿತು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರಿಲ್ಲದೇ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಮಾಡಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಸರ್ಕಾರದ ಒಳಜಗಳದಿಂದ ತೆರವಾದ ಮಂತ್ರಿ ಸ್ಥಾನವನ್ನು ಈವರೆಗೂ ಭರ್ತಿ ಮಾಡದೇ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಿಯು ಬೋರ್ಡ್ ಗೆ ಕೂಡಲೇ ನಿರ್ದೇಶಕರನ್ನು ನೇಮಿಸಬೇಕು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.