ಎಬಿವಿಪಿ ಪ್ರತಿಭಟನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಗರಂ

ಶುಕ್ರವಾರ, 19 ಆಗಸ್ಟ್ 2016 (17:29 IST)
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಸುಮ್ಮನೆ ಹೋರಾಟ ಮಾಡುವುದು ಸರಿಯಲ್ಲ ಎಂದು ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಕಾರ್ಯಕ್ರಮದ ಧ್ವನಿ ಮುದ್ರಣಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ದೇಶದ್ರೋಹ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವುದು ಸರಿಯಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡಬಾರದು ಎಂದು ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ.
 
ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕಾಶ್ಮೀರಿಗರಿಗೆ ಭಾರತೀಯ ಸೇನೆಯಿಂದ ತೊಂದರೆಯಾಗುತ್ತಿದೆ. ಸೇನೆಯಿಂದ ಸ್ವಾತಂತ್ರ್ಯ ಬೇಕು ಎಂದು ಆಗ್ರಹಿಸಿ ಕೆಲವರು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ