ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ್ರೋಹದ ಘೋಷಣೆ ಕೂಗಿದವರನ್ನು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.