ಬೆಳ್ಳಂಬೆಳಗ್ಗೆ ಎಸಿಬಿ ದಾಳಿ: ಅಧಿಕಾರಿಗಳಿಗೆ ಶಾಕ್
ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶಿವಾನಂದ ರಡ್ಡೆರ ಎಂಬುವರ ಮನೆ ಹಾಗೂ ಕಚೇರಿ ಮೇಲೆ ದಾಳಿ ದಾಳಿ ನಡೆಸಿದ್ದಾರೆ.
ಶಿವಾನಂದ ರಡ್ಡೆರ ರೋಣ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಾಹಿಸುತ್ತಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪದ ದೂರಿನ ಮೇರೆಗೆ ಎಸಿಬಿ ಡಿ.ಎಸ್.ಪಿ ವಾಸುದೇವ ರಾಮ್, ಸಿಪಿಐ ಆನಂದ ವನಕುದರಿ, ಪಿ.ಎಸ್.ಐ ಮಂಜುನಾಥ ಕುಸಗಲ್ ನೇತೃತ್ವದಲ್ಲಿ ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿದ್ದಾರೆ. ಮಹತ್ವದ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.