ಭ್ರಷ್ಟಾಚಾರಿಗಳ ವಿರುದ್ಧ ಎಸಿಬಿ ರೈಡ್

ಬುಧವಾರ, 24 ನವೆಂಬರ್ 2021 (15:33 IST)
ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ.ಎಸಿಬಿ ದಾಳಿ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಅಧಿಕಾರಿಗಳ ಮನೆಯಲ್ಲಿ ತೀವ್ರ ಶೋಧ ಕಾರ್ಯ ಮುಂದುವರಿದಿದ್ದು ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ದಾಳಿ ವೇಳೆ ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರಿಗೆ ಸಂಬಂಧಪಟ್ಟ ಅಪಾರ ಪ್ರಮಾಣದ ಅಕ್ರಮ ಆಸ್ತಿಪಾಸ್ತಿಗಳನ್ನು ಶೋಧ ಮಾಡಲಾಗುತ್ತಿದೆ ಎನ್ನುವುದು ವಿಶೇಷ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ