ಸಿಎಂ ಸಿದ್ದರಾಮಯ್ಯರ ಕಪಿಮುಷ್ಠಿಯಲ್ಲಿ ಎಸಿಬಿ: ಈಶ್ವರಪ್ಪ

ಸೋಮವಾರ, 21 ಆಗಸ್ಟ್ 2017 (13:07 IST)
ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯರ ಕಪಿಮುಷ್ಠಿಯಲ್ಲಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳು ಸಿಎಂ ಆದೇಶವನ್ನು ಪಾಲಿಸುತ್ತಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ರಾಜಭವನದಲ್ಲಿ ಸಿಎಂ ವಿರುದ್ಧ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿ ಇಲಾಖೆಯನ್ನು ಸಿದ್ದರಾಮಯ್ಯ ತಮ್ಮ ಸುರ್ಪದಿಗೆ ತೆಗೆದುಕೊಂಡಿದ್ದಾರೆ. ವಿಪಕ್ಷಗಳನ್ನು ಹಣಿಯಲು ಇಂತಹ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
 
ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಸುಳ್ಳು ಕೇಸ್ ದಾಖಲಿಸಲಾಗಿದೆ. ದೂರು ದಾಖಲಿಸಿದ ಮಾರನೇ ದಿನವೇ ಎಫ್‌ಐಆರ್ ದಾಖಲಿಸಿರುವುದು ನೋಡಿದಲ್ಲಿ ಇದರಲ್ಲಿ ಸರಕಾರದ ಕೈವಾಡವಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಕಿಡಿಕಾರಿದರು.
 
ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಮಾಡಿದ ಬಿಜೆಪಿ ನಾಯಕರು, ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ  ಸರಕಾರದ ವಿರುದ್ಧ ದೂರು ಸಲ್ಲಿಸಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ