ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಆಸಿಡ್ ಎರಚಿದ ದುಷ್ಕರ್ಮಿಗಳು

ಶನಿವಾರ, 4 ಜನವರಿ 2020 (11:48 IST)
ಆನೇಕಲ್ : ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಬೆಂಗಳೂರಿನ ಚಂದಾಪುರದಲ್ಲಿ ನಡೆದಿದೆ.



ಜ್ಯೋತಪ್ಪ(50) ಆಸಿಡ್ ದಾಳಿಗೆ ಒಳಗಾಗಿ ಸಾವನಪ್ಪಿದ ವ್ಯಕ್ತಿ. ಇವರು ಶುಕ್ರವಾರ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಬಂದು ಇವರ ಮೇಲೆ ಆಸಿಡ್ ಎರಚಿದ್ದಾರೆ. ಆಗ ಇದನ್ನು ಕಂಡ ದಾರಿಹೋಕರೊಬ್ಬರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಜ್ಯೋತಪ್ಪ ಸಾವನಪ್ಪಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ