ಬೆಳಗಾವಿ: ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಕ್ರೂಸರ್‌ನಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಂದಿ ಮೃತಪಟ್ಟಿದ್ದಾರೆ. 13 ಜನ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಸರಕಾರಿ ಆಸ್ಪತ್ರೆ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ರಾತ್ರಿ ವೇಳೆ ಕ್ರೂಸರ್ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ