ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ
ಬಳ್ಳಾರಿ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ಐವರನ್ನು ಹೊಸಪೇಟೆ ಆಸ್ಪತ್ರೆ ಹಾಗೂ ತೀವ್ರವಾಗಿ ಗಾಯಗೊಂಡ ಮೂವರನ್ನು ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಶಂಕಿಸಲಾಗಿದೆ.