ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

ಸೋಮವಾರ, 4 ಮೇ 2015 (12:38 IST)
ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇತರೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಪಂತಹಳ್ಳಿ ಗ್ರಾಮದ ಬಳಿ ನಡೆದಿದೆ.  

ಅಪಘಾತದಲ್ಲಿ ಮೃತಪಟ್ಟವರನ್ನು ಲತೀಫ್(50) ಮತ್ತು ವಜೀರ್ ಖಾನ್(55) ಎಂದು ಹೇಳಲಾಗಿದ್ದು, ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಇತರೆ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಇಲ್ಲಿನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  

ಮಳವಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ