ಧರ್ಮಸ್ಥಳದಿಂದ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ನಾಲ್ವರು ದುರ್ಮರಣ
ಇನ್ನೂ ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ, ಮಾರ್ಗಮಧ್ಯ ಅವರೂ ಕೊನೆಯುಸಿರೆಳೆದರು ಎನ್ನಲಾಗಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ ಹಂಪಯ್ಯ(65), ಪ್ರೇಮಾ(58), ಮಂಜಯ್ಯ(60) ಮತ್ತು ಪ್ರಭಾಕರ(45) ಎಂದು ಗುರುತಿಸಲಾಗಿದೆ.