ಬೆಂಗಳೂರು :ಜನವರಿ 14ರಂದು ಬೆಳಗ್ಗೆ ಸುಮಾರು 11-30ರ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ರಿಂಗ್ ರಸ್ತೆಯ ಕೆರೆ ಬಳಿ ಅಕ್ರಮ ಪಿಸ್ತೂಲ್‌ಗಳು ಮತ್ತು ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಿ, ಆರೋಪಿಗಳನ್ನ ಬಂಧಿಸಿದ್ದಾರೆ.
ರಾಹುಲ್, ಸತೀಶ್ ಮಾನೆ ಹಾಗೂ ಮಲಿಕ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2 ಕಂಟ್ರಿಮೇಡ್ ಪಿಸ್ತೂಲ್, 9 ಜೀವಂತ ಗುಂಡುಗಳು, ಒಂದು ಸ್ವಿಫ್ಟ್ ಡಿಸೈರ್ ಕಾರ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಪಿಸ್ತೂಲ್‌ಗಳು ಮತ್ತು ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ, ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳನ್ನ ಸಿಸಿಬಿಯ ಸಂಘಟಿತ ಅಪರಾಧ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡ ಬಂಧಿಸಿದೆ.