ಕಾಲ್ಪನಿಕ, ಸುಳ್ಳು ಮಾಹಿತಿ ಪ್ರಸಾರ ಆರೋಪ: ಯೂಟ್ಯೂಬರ್‌ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್‌

Sampriya

ಭಾನುವಾರ, 13 ಜುಲೈ 2025 (10:32 IST)
Photo Credit X
ಬೆಂಗಳೂರು:  ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಲಾದ ಕಾಲ್ಪನಿಕ ಮಾಹಿತಿಯನ್ನು ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಯೂಟ್ಯೂಬರ್‌ ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 

ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯೊಂದಿಗೆ ವಿಡಿಯೊ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಮೀರ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 192, 240, 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಇತರೆ ಮಾಹಿತಿಯನ್ನೊಳಗೊಂಡ ಕಾಲ್ಪನಿಕವಾಗಿ ಸೃಷ್ಟಿಸಲಾದ ಸುಳ್ಳು ಮಾಹಿತಿಯ ವಿಡಿಯೊವನ್ನೂ ಸಮೀರ್‌ ಪ್ರಸಾರ ಮಾಡಿದ್ದು, ಈ ಕಾರಣಕ್ಕಾಗಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ