ಕುಮಾರಸ್ವಾಮಿಯಿಂದ 200 ಎಕರೆ ಜಮೀನು ಕಬಳಿಕೆ: ಹಿರೇಮಠ

ಭಾನುವಾರ, 30 ಅಕ್ಟೋಬರ್ 2016 (17:43 IST)
ಹುಬ್ಬಳ್ಳಿ: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 200 ಎಕರೆ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ.
 
ಇಂದು ನಗರದ ಪತ್ರಿಕಾ ಭವನದಲ್ಲಿ ಸಂಬಂಧಿಸಿದ ಕಾಗದ ಪತ್ರಗಳ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕುಮಾರಸ್ವಾಮಿ ಕಬಳಿಸಿದ ಭೂಮಿಯನ್ನು ವಾಪಸ್ಸು ಪಡೆಯಬೇಕೆಂದು ಕಂದಾಯ ಇಲಾಖೆಗೆ ಹಾಗೂ ರಾಮನಗರ ಜಿಲ್ಲಾಧಿಕಾರಿಗಳಿಗೆ ಎರಡೆರಡು ಬಾರಿ ಪತ್ರ ಬರೆದರೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
 
ಸುಮಾರು 110 ಎಕರೆ ಗೋಮಾಳ ಮತ್ತು ಪರಿಶಿಷ್ಟ ಜಾತಿ, ಪಂಗಡದ ವರ್ಗಕ್ಕೆ ಹಂಚಿಕೆಯಾದ ಒಟ್ಟು 200 ಎಕರೆ ಜಾಗ ಕಬಳಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜೊತೆಗೆ ಅವರ ಸಂಬಂಧಿಗಳಾದ ಡಿ.ಸಿ. ತಮ್ಮಣ್ಣ, ದೇವೇಗೌಡರ ನಾದಿನಿ ಸಾವಿತ್ರಮ್ಮ ಹನುಮೇಗೌಡ ಅವರು ಕೂಡಾ ಭಾಗಿಯಾಗಿದ್ದಾರೆ ಎಂದು ಎಸ್.ಆರ್. ಹಿರೇಮಠ ಸಂಬಂಧಿಸಿದ ಕೆಲವು ದಾಖಲೆ ಪತ್ರಗಳನ್ನು ಬಿಡುಗಡೆಗೊಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ವೆಬ್ದುನಿಯಾವನ್ನು ಓದಿ