ಕೈಗಾರಿಕಾ ಸ್ಥಾಪನೆಗಾಗಿ ಜಮೀನು ಭೂ ಸ್ವಾಧೀನ : ನಿರಾಣಿ

ಶನಿವಾರ, 24 ಸೆಪ್ಟಂಬರ್ 2022 (12:38 IST)
ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ.

ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೇ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದರು. 

ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಿರಾಣಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ