ಬೆಂಗಳೂರು :ಬೆಂಗಳೂರಿನ ಪಿಜಿಗಳಲ್ಲಿ ಹೊರರಾಜ್ಯದವರು ಮಾತ್ರವಲ್ಲದೇ ಹೊರದೇಶದವರೂ ಸಹ ವಾಸವಾಗಿದ್ದಾರೆ. ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ಟೆಕ್ಕಿಗಳು ಪಿಜಿಯಲ್ಲಿ ವಾಸಿಸುತ್ತಿದ್ದಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ ಪಿಜಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಮತ್ತು ವಾಸ ಮಾಡುವವರ ಪೂರ್ವಾಪರ ಮಾಹಿತಿ ಸಂಗ್ರಹಣೆಗೆ ಸೂಚನೆ ನೀಡಲಾಗಿದೆ ಎಂದು ದಯಾನಂದ್ ಹೇಳಿದ್ದಾರೆ.
ಪಿಜಿಗಳಲ್ಲಿ ವಾಸವಾಗಿರುವ ಜನರ ರಕ್ಷಣೆ ನಮ್ಮ ಹೊಣೆಗಾರಿಕೆಯಾಗಿದ್ದು, ಯಾವುದೇ ಹೊರಗಿನಿಂದ ಬಂದ ವ್ಯಕ್ತಿಗಳು ಇಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳುತ್ತಿರುವುದಾಗಿ ಆಯುಕ್ತರು ಮಾಹಿತಿ ನೀಡಿದರು. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ ಸೆಂಟರ್ ಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಮಾರ್ಗಸೂಚಿ ವಿಧಿಸಲಾಗಿದ್ದು, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.