ಅಧಿವೇಶನದ ಮುಗಿದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಬೊಮ್ಮಾಯಿ

ಶುಕ್ರವಾರ, 17 ಸೆಪ್ಟಂಬರ್ 2021 (07:56 IST)
ಬೆಳಗಾವಿ :  ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲಾಡಳಿತಕ್ಕೆ ಕೆಲವು ಸಲಹೆ ಸೂಚನೆ ನೀಡಲಾಗಿತ್ತು, ಎಲ್ಲವನ್ನು ಪರಿಶೀಲಿಸಿ ಆದಷ್ಡು ಬೇಗ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಅಧಿವೇಶನ ಮುಗಿದ ನಂತರ ಜಿಲ್ಲಾಡಳಿತ ಹಣಕಾಸು ಇಲಾಖೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಜೊತೆಗೆ ಸಭೆ ನಡೆಸಿ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ