ನದಿ ನೀರಿನ ಮಟ್ಟ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವೆ ಎಂದ ಡಿಕೆಶಿ

ಮಂಗಳವಾರ, 11 ಡಿಸೆಂಬರ್ 2018 (19:40 IST)
ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಮತ್ತು ಹೂಳು ಪರಿಶೀಲನೆಗೆ ಡ್ರೋಣ್ ಬಳಸಿ ಸರ್ವೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೊಡಗು ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಪರಿಶೀಲನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ವರದಿ ಬರಲಿದೆ ಎಂದು ಅವರು ತಿಳಿಸಿದರು.
ನದಿ ಪಾತ್ರದಲ್ಲಿ ತುಂಬಿರುವ ಹೂಳಿನ ಪ್ರಮಾಣ ದ್ರೋಣ್ ಸಹಾಯದಿಂದ ತಿಳಿದು ಹೂಳು ಹೊರತೆಗೆಯಲಾಗುವುದು ಎಂದು ಅವರು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ನದಿ ಹರಿಯುವ ಕಡೆ ಹೂಳು ತುಂಬಿದ್ದು, ಕಾವೇರಿ ನದಿ ನೀರಿಗೆ ಕಂಟಕ ಎದುರಾಗಲಿದೆ. ಮುಂದಿನ 3 ತಿಂಗಳಲ್ಲಿ ಮಳೆ ಸುರಿಯಲಿದ್ದು, ಹೂಳು ತೆಗೆಯದಿದ್ದರೇ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ವೀಣಾ ಅಚ್ಚಯ್ಯ ಆತಂಕ ವ್ಯಕ್ತಪಡಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ