ಬೆಂಗಳೂರಿನಲ್ಲಿ ಮಾತನ್ನಾಡುತ್ತಿದ್ದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರೇತರ ಸಂಸ್ಥೆ 'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ' ಸಂಸ್ಥೆಯ ಸದಸ್ಯರ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್ಐಆರ್) ದಾಖಲಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿದ್ದು ಸತ್ಯವೆಂದು ಸಾಬೀತಾದರೆ ಅವರನ್ನು ರಕ್ಷಿಸುವುದಿಲ್ಲ. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಆಮ್ನೆಸ್ಟಿ ಇಂಡಿಯಾ'ವನ್ನು ನಿಷೇಧಿಸಿ ಮತ್ತು 'ದಿ ಯುನೈಟೆಜ್ ಥಿಯಾಲಜಿಕಲ್' ಕಾಲೇಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ವ್ಯಾಪಕ ಪ್ರತಿಭಟನೆಯನ್ನು ಮುಂದುವರೆಸಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಸಹ ಕೈಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಹ ಎಬಿವಿಪಿ ಪ್ರತಿಭಟನೆಯನ್ನು ಕೈಗೊಂಡಿದೆ.