ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ

ಮಂಗಳವಾರ, 21 ಫೆಬ್ರವರಿ 2023 (08:22 IST)
ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಲೋಕಾರ್ಪಣೆ ಮಾಡಿದರು.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದಿಂದ ಈ ಅಧಿನಿಯಮಗಳ ಕನ್ನಡ ಆವೃತ್ತಿ ಸಿದ್ಧಪಡಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ.

ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ