ಮೈಸೂರು : ಭಗವದ್ಗೀತೆಯನ್ನು ಪಠ್ಯಕ್ರಮವಾಗಿ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಕಿಡಿಕಾರಿದರು.
ರಾಜ್ಯಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ. ಇಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ ಮೇಲೆ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು. ಶಿಕ್ಷಣ ಬಿಟ್ಟು ಸರ್ಕಾರ ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು.
ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು. ನ್ಯಾಯಾಲಯದ ತೀರ್ಪು ಸಹ ಸ್ಪಷ್ಟವಾಗಿ ಇದನ್ನೇ ಹೇಳಿದೆ ಎಂದು ತಿಳಿಸಿದರು.